ADVERTISEMENT

ಮೇಕೆದಾಟು ಕಾನೂನು ಹೋರಾಟದಲ್ಲಿ ನಮಗೆ ನ್ಯಾಯ ಸಿಕ್ಕಂತಾಗಿದೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 9:22 IST
Last Updated 13 ನವೆಂಬರ್ 2025, 9:22 IST
<div class="paragraphs"><p>ಡಿ.ಕೆ. ಶಿವಕುಮಾರ್, ಮೇಕೆದಾಟು ಪ್ರದೇಶದಲ್ಲಿ ಭೋರ್ಗರೆಯುತ್ತಾ ಹರಿದಿರುವ ಕಾವೇರಿ ಪ್ರಜಾವಾಣಿ ಚಿತ್ರ : ಆರ್‌.ಜಿತೇಂದ್ರ</p></div>

ಡಿ.ಕೆ. ಶಿವಕುಮಾರ್, ಮೇಕೆದಾಟು ಪ್ರದೇಶದಲ್ಲಿ ಭೋರ್ಗರೆಯುತ್ತಾ ಹರಿದಿರುವ ಕಾವೇರಿ ಪ್ರಜಾವಾಣಿ ಚಿತ್ರ : ಆರ್‌.ಜಿತೇಂದ್ರ

   

ಬೆಂಗಳೂರು: 'ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ' ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ಮೇಕೆದಾಟು, 'ನಮ್ಮ ನೀರು, ನಮ್ಮ ಹಕ್ಕು' ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ” ಎಂದು ತಿಳಿಸಿದರು.

ADVERTISEMENT

'ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ' ಎಂದರು.

ಸಹಕಾರ ನೀಡದೇ ಸಿಡಬ್ಲ್ಯೂಸಿ ಮುಂದೆ ಬೇರೆ ಆಯ್ಕೆಯೇ ಇಲ್ಲ

'ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಈ ಯೋಜನೆಗೆ ಸಹಕಾರ ನೀಡುವುದೇ' ಎಂದು ಸುದ್ದಿಗಾರರು ಕೇಳಿದಾಗ, “ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿ ಕೊಡಲೇಬೇಕು” ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.