ADVERTISEMENT

ಮೇಕೆದಾಟು: ವನ್ಯಜೀವಿ ಅನುಮೋದನೆಗೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2026, 16:26 IST
Last Updated 19 ಫೆಬ್ರುವರಿ 2026, 16:26 IST
<div class="paragraphs"><p>ಮೇಕೆದಾಟು ಪ್ರದೇಶ</p></div>

ಮೇಕೆದಾಟು ಪ್ರದೇಶ

   

ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ. 

ಯೋಜನೆಗೆ 5,200 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಅನುಮೋದನೆ ಕೋರಿ ಕಾವೇರಿ ನೀರಾವರಿ ನಿಗಮವು ಜನವರಿ 4ರಂದು ಪ್ರಸ್ತಾವ ಸಲ್ಲಿಸಿತ್ತು. ‘ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಅನುಮೋದನೆ ಪಡೆದಿರುವ ವಿಸ್ತೃತ ಯೋಜನಾ ವರದಿಯನ್ನು ರಾಜ್ಯ ಸಲ್ಲಿಸಿಲ್ಲ’ ಎಂದು ಸಚಿವಾಲವು ಜನವರಿ 15ರಂದು ಆಕ್ಷೇಪ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರವು ಅಪೂರ್ಣ ದಾಖಲೆಗಳನ್ನು ಸಲ್ಲಿಸಿದೆ ಎಂದೂ ಹೇಳಿತ್ತು.

ADVERTISEMENT

‘ಸಮೀಕ್ಷೆ ಕಾರ್ಯಕ್ಕೆ ಈ ದಾಖಲೆಗಳನ್ನು ನೀಡುವ ಅಗತ್ಯ ಇಲ್ಲ’ ಎಂದು ನೀರಾವರಿ ನಿಗಮವು ಇದೇ 17ರಂದು ಉತ್ತರ ನೀಡಿದೆ. ಜತೆಗೆ, ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯಿಂದ ವನ್ಯಜೀವಿ ಅನುಮೋದನೆ ಪಡೆಯಲು ಮತ್ತೊಂದು ಪ್ರಸ್ತಾವವನ್ನೂ ಸಲ್ಲಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.