ADVERTISEMENT

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ: 3ನೇ ದಿನದ ನಡಿಗೆ ಆರಂಭ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 5:25 IST
Last Updated 1 ಮಾರ್ಚ್ 2022, 5:25 IST
   

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಯ ಮೂರನೇ ದಿನದ ನಡಿಗೆ ಪಟ್ಟಣಗೆರೆ ಪೂರ್ಣಿಮಾ ಪ್ಯಾಲೇಸ್ ಕಲ್ಯಾಣ ಮಂಟಪದ ಆವರಣದಿಂದ ಮಂಗಳವಾರ ಬೆಳಿಗ್ಗೆ ಆರಂಭವಾಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.‌ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಪಕ್ಷದ ಹಲವು ನಾಯಕರು, ಶಾಸಕರು, ಮಾಜಿ ಶಾಸಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.

ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.