ಬೆಂಗಳೂರು: ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರೈತಸಂಘಕ್ಕೆ ಬೆಂಬಲ ನೀಡುವ ಸಂಬಂಧ, ರೈತಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರು ಸೋಮವಾರ ಚರ್ಚೆ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್. ಮಂಡ್ಯ ಜಿಲ್ಲೆಯ ನಾಯಕ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಯೂ ರೈತ ಸಂಘಕ್ಕೆ ಕಾಂಗ್ರೆಸ್ ಬೆಂಬಲ ನೀಡಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.