ಬೆಂಗಳೂರು: ‘ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ’ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಎಂ.ಎಸ್. ನೌಹೇರಾ ಶೇಖ್ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಕರ್ನಾಟಕ ಕನಿಷ್ಠ ವೇತನ ನಿಯಮಗಳು-1958ರ ಪ್ರಕಾರ ದಿನದ ಕೆಲಸದ ಅವಧಿ 9 ಗಂಟೆ ಇರಬೇಕು. ಈ ಮಾನದಂಡ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರ ವಿಚಾರದಲ್ಲಿ ಪಾಲನೆಯಾಗಿಲ್ಲ’ ಎಂದು ಹೇಳಿದೆ.
ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ-1948ರ ಅಡಿ ಸೂಕ್ತ ವೇತನ ನಿಗದಿಪಡಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.