
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಿರುವ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ಮೊಟ್ಟೆ, ಬಾಳೆಹಣ್ಣು ಸೇರಿದಂತೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ.
2019–20ನೇ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ವಿಭಾಗಗಳನ್ನು ಆರಂಭಿಸಲಾಗಿತ್ತು. ಆದರೆ, ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಆಗಿರಲಿಲ್ಲ. ಪ್ರಧಾನಮಂತ್ರಿ ಪೋಷಣ್ ಶಕ್ತಿ ಅಭಿಯಾನದ ಅನುಮೋದನಾ ಮಂಡಳಿಯ ಸಭೆಯ ನಿರ್ಧಾರದಂತೆ ಡಿ.1ರಿಂದ ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಗೂ ವಿಸ್ತರಿಸಲಾಗಿದೆ.
ಪ್ರತಿ ಮಗುವಿಗೆ ಪ್ರತಿದಿನ ಕೇಂದ್ರ ಸರ್ಕಾರ ₹4.07, ರಾಜ್ಯ ಸರ್ಕಾರ ₹2.71 ವೆಚ್ಚ ಮಾಡಲಿವೆ. ಒಟ್ಟು ಆಹಾರ ತಯಾರಿ ವೆಚ್ಚ ₹6.78 ನಿಗದಿ ಮಾಡಲಾಗಿದೆ. ಅದಲ್ಲದೆ, ವಾರದಲ್ಲಿ ನಾಲ್ಕು ದಿನ ಮೊಟ್ಟೆ ಖರೀದಿಗೆ ಅಜೀಂ ಪ್ರೇಮ್‌ಜಿ ಫೌಂಡೇಶನ್ ಹಣಕಾಸಿನ ಸಹಾಯ ಮಾಡಲಿದೆ. ಉಳಿದ ಎರಡು ದಿನಗಳ ವೆಚ್ಚವನ್ನು ಶಾಲಾ ಶಿಕ್ಷಣ ಇಲಾಖೆ ಭರಿಸುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.