ADVERTISEMENT

ಫೆ.12ಕ್ಕೆ ಬಿಸಿಯೂಟ ಸಿಬ್ಬಂದಿ ಮುಷ್ಕರ: ಪರ್ಯಾಯಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 15:55 IST
Last Updated 10 ಫೆಬ್ರುವರಿ 2026, 15:55 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಅಕ್ಷರ ದಾಸೋಹ (ಬಿಸಿಯೂಟ) ಸಿಬ್ಬಂದಿ ಫೆ.12ರಂದು ಒಂದು ದಿನದ ಮುಷ್ಕರ ಹಮ್ಮಿಕೊಂಡಿದ್ದು, ಅಂದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ, ಕ್ಷೀರಭಾಗ್ಯ ಹಾಗೂ ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸೂಚಿಸಿದೆ.

ADVERTISEMENT

ಈ ಕುರಿತು ಪಿಎಂ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಬಿಸಿಯೂಟ ಸಿಬ್ಬಂದಿಯು ಮುಷ್ಕರದಲ್ಲಿ ಭಾಗವಹಿಸದಂತೆ ಆಯಾ ಶಾಲೆಯ ಮುಖ್ಯ ಶಿಕ್ಷಕರು ಅವರ ಮನವೊಲಿಸಲು ಪ್ರಯತ್ನಿಸಬೇಕು. ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡರೆ ಸ್ಥಳೀಯವಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಊಟ ಮತ್ತು ಹಾಲು ವಿತರಿಸಬೇಕು ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಫೆ. 12ರಂದು ಸಿಐಟಿಯು ನೇತೃತ್ವದಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ನೌಕರರು ಭಾಗವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.