ADVERTISEMENT

ಕಾಳ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ: ಖಂಡ್ರೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2025, 15:16 IST
Last Updated 23 ಜನವರಿ 2025, 15:16 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೆಂಗಳೂರು: ಬೇಸಿಗೆ ಸಮೀಪಿಸುತ್ತಿದ್ದು, ಪದೇ ಪದೇ ಕಾಳ್ಗಿಚ್ಚು ಕಾಣಿಸಿಕೊಳ್ಳುವ ವಲಯ ಸೇರಿ ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ನೀಡಿರುವ ಸೂಚನೆಯಲ್ಲಿ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕ ಸಾಧನಗಳು ಮತ್ತು ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆಯೂ ನಿರ್ದೇಶನ ನೀಡಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಚಾರ್ಮಾಡಿ ಘಾಟ್‌ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಸಂಭವಿಸಿದ ಕಾಳ್ಗಿಚ್ಚಿನಿಂದ ಅರಣ್ಯಕ್ಕೆ ಆಗಿರುವ ಹಾನಿಯ ಕುರಿತು ಅರಣ್ಯ ಸಚಿವರು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.

ADVERTISEMENT

ಕಾಳ್ಗಿಚ್ಚಿನ ಬಗ್ಗೆ ಸಂಬಂಧಿತ ವಲಯಕ್ಕೆ ಮಾಹಿತಿ ಲಭಿಸಿದ ಎಷ್ಟು ಸಮಯದಲ್ಲಿ ಬೆಂಕಿ ನಂದಿಸಲು ಕ್ರಮ ವಹಿಸಲಾಗಿದೆ. ಯಾವ ಯಾವ ವಿಧಾನ ಬಳಸಲಾಗಿದೆ ಮತ್ತು ಎಷ್ಟು ಸಂಭಾವ್ಯ ಹಾನಿ ತಡೆಯಲಾಗಿದೆ ಎಂಬ ವಿವರವನ್ನು ಏಳು ದಿನಗಳ ಒಳಗಾಗಿ ನೀಡುವಂತೆಯೂ ಖಂಡ್ರೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.