ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಇನ್ನು ಮುಂದೆ ಮಿನಿ ಟ್ಯಾಬ್‌ಗಳನ್ನು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಗುರುವಾರ ಈ ವಿಷಯ ತಿಳಿಸಿದ ಅವರು, ’ಈ ಹಿಂದೆ ನೀಡಿದ್ದ ಮೊಬೈಲ್‌ಗಳುಹಾಳಾಗಿರುವುದರಿಂದ ಮಿನಿಟ್ಯಾಬ್‌ಗಳನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಸಲು ನಿರ್ಧರಿಸಲಾಗಿದೆ‘ ಎಂದರು.
’ಈಗಿರುವ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.