
ಪ್ರಜಾವಾಣಿ ವಾರ್ತೆಶಿವಾನಂದ ಪಾಟೀಲ
ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಶೇಂಗಾ ಮತ್ತು ಸೋಯಾಬೀನ್ ಖರೀದಿ ಅವಧಿಯನ್ನು ಜನವರಿ 26 ರವರೆಗೆ, ಹೆಸರುಕಾಳು, ಉದ್ದಿನಕಾಳು ಹಾಗೂ ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈ ಎಲ್ಲ ಉತ್ಪನ್ನಗಳ ಖರೀದಿ ಅವಧಿಯು ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಬಂದಿದ್ದರಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.