ADVERTISEMENT

ಗಣಿ ಗುತ್ತಿಗೆ ಪ್ರಕರಣ | ಜಾಮೀನು ಪ್ರಶ್ನೆ: ಹೈಕೋರ್ಟ್‌ಗೆ ಎಚ್‌ಡಿಕೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 2 ಮೇ 2025, 23:26 IST
Last Updated 2 ಮೇ 2025, 23:26 IST
ಎಚ್‌ಡಿಕೆ ಜಾಮೀನು ಅರ್ಜಿ ವಜಾ
ಎಚ್‌ಡಿಕೆ ಜಾಮೀನು ಅರ್ಜಿ ವಜಾ   

ಬೆಂಗಳೂರು: ‘ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ 550 ಎಕರೆ ಭೂಮಿಯನ್ನು ಗಣಿ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಲೋಕಾಯುಕ್ತ ವಿಶೇಷ ತನಿಖಾ ದಳ ಸಲ್ಲಿಸಿರುವ ಅರ್ಜಿಯನ್ನು ಅಮಾನತುಗೊಳಿಸಬೇಕು’ ಎಂದು ಕೋರಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಕುಮಾರಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲ ಹಷ್ಮತ್‌ ಪಾಷಾ ಅವರ ಕೋರಿಕೆಯ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.

ಲೋಕಾಯುಕ್ತ ಪರ ಹಾಜರಿದ್ದ ವೆಂಕಟೇಶ್ ಅರಬಟ್ಟಿ, ‘ವಿಶೇಷ ನ್ಯಾಯಾಲಯವು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿ ನಿರ್ಧರಿಸುವುದನ್ನು ವಿಳಂಬಗೊಳಿಸುವ ಉದ್ದೇಶದಿಂದ ಕುಮಾರಸ್ವಾಮಿ ಈ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಈ ಅರ್ಜಿ ಊರ್ಜಿತವಾಗುವುದಿಲ್ಲ. ಆದ್ದರಿಂದ, ಇದನ್ನು ವಜಾಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.