ADVERTISEMENT

ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬ ಮುಖ್ಯಮಂತ್ರಿ ಘೋಷಣೆ: ಸಚಿವ ಈಶ್ವರಪ್ಪ ಲೇವಡಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 21:54 IST
Last Updated 1 ಜುಲೈ 2021, 21:54 IST
ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ   

ಬೆಂಗಳೂರು: ‘ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಈ ಮಟ್ಟಕ್ಕೆ ಇಳಿಯಬಾರದಿತ್ತು’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಬೆಂಬಲಿಗ ಶಾಸಕರ ಬಾಯಿ ಮುಚ್ಚಿಸಲು ಸಿದ್ದರಾಮಯ್ಯ ಮುಂದಾಗಿಲ್ಲ. ಡಿ.ಕೆ. ಶಿವಕುಮಾರ್‌ ಕೂಡಾ ಯಾರ ಬಾಯಿಯನ್ನೂ ಮುಚ್ಚಿಸಿಲ್ಲ. ಎಂ.ಬಿ. ಪಾಟೀಲ ನಾನು ಸನ್ಯಾಸಿ ಅಲ್ಲ ಅಂತಿದ್ದಾರೆ. ದಲಿತ ಮುಖ್ಯಮಂತ್ರಿ ಎಂದು ಜಿ. ಪರಮೇಶ್ವರ, ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದುತನ್ವೀರ್ ಸೇಠ್ ಹೇಳುತ್ತಿದ್ದಾರೆ. ಭಾವಿ ಮುಖ್ಯಮಂತ್ರಿ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಬಡಿದಾಟ ನಡೆಯುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT