ADVERTISEMENT

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಬೊಮ್ಮಾಯಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2019, 8:57 IST
Last Updated 29 ಆಗಸ್ಟ್ 2019, 8:57 IST
   

ಬೆಂಗಳೂರು:ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆ ನಿಗ್ರಹ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಸಭೆ ನಡೆಸಿದರು.

ಜಿಲ್ಲಾ ಎಸ್‌ಪಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಸಚಿವರು, ವಸ್ತುಸ್ಥಿತಿಯ ಮಾಹಿತಿ ಪಡೆದರು.

ಐಜಿಪಿ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು, ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಸೀಮಂತ್ ಕುಮಾರ್ ಸಿಂಗ್, ಅಲೋಕ್ ಕುಮಾರ್, ಶಿವಕುಮಾರ್, ಪರಶಿವಮೂರ್ತಿ ಭಾಗವಹಿಸಿದರು.

ADVERTISEMENT

ಇನ್ನಷ್ಟು ಸುದ್ದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.