ADVERTISEMENT

ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 6:48 IST
Last Updated 9 ಮಾರ್ಚ್ 2021, 6:48 IST
ಸಚಿವ ಬಸವರಾಜ ಬೊಮ್ಮಾಯಿ
ಸಚಿವ ಬಸವರಾಜ ಬೊಮ್ಮಾಯಿ   

ಬೆಂಗಳೂರು: 'ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, 'ಎಲ್ಲ ವಿಚಾರಣೆ ಕಾನೂನು ಪ್ರಕಾರ ನಡೆಯುತ್ತದೆ' ಎಂದರು.

'ದೂರು ಬಂದ ನಂತರ ಪೊಲೀಸರುವಿಚಾರಣೆ ಆರಂಭಿಸಿದ್ದಾರೆ.ಕಾನೂನು ಪ್ರಕಾರ ಎಲ್ಲ ಆಯಾಮಗಳಲ್ಲಿ ತನಿಖೆಗೆ ಒಳಪಡಿಸಲಾಗುವುದು' ಎಂದರು.

ADVERTISEMENT

'ಬಾಲಚಂದ್ರ ಜಾರಕಿಹೊಳಿ ಅವರು ಹೇಳಿರುವ 2+3+4 ಏನು ಎಂಬುದು ಗೊತ್ತಿಲ್ಲ. ಆ ಬಗ್ಗೆಯೂ ವಿಚಾರಣೆ ಮಾಡುತ್ತೇವೆ' ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.