ADVERTISEMENT

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಪ್ರಸ್ತಾವ: ಬಿ.ಸಿ. ನಾಗೇಶ್‌

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 19:13 IST
Last Updated 15 ಸೆಪ್ಟೆಂಬರ್ 2022, 19:13 IST
ಬಿ.ಸಿ. ನಾಗೇಶ್‌
ಬಿ.ಸಿ. ನಾಗೇಶ್‌   

ಬೆಂಗಳೂರು:‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಉಳಿದಿರುವ 2,120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಕಡತವುಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ಬಿಜೆಪಿಯ ಬಸವರಾಜ ಹೊರಟ್ಟಿ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಸರ್ಕಾರಿ ಪ್ರೌಢಶಾಲೆಗಳಲ್ಲಿನ 200 ದೈಹಿಕಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಬೆಂಗಳೂರಿನ ಕೇಂದ್ರಿಕೃತ ದಾಖಲಾತಿ ಘಟಕದ ಮೂಲಕ ಭರ್ತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಪದವಿ ಪೂರ್ವ ಕಾಲೇಜುಗಳಲ್ಲಿ ಮಂಜೂರಾಗಿರುವ 20 ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗಳು ಖಾಲಿ ಉಳಿದಿವೆ. ಇವುಗಳಲ್ಲಿ ಶೇ 50ರಷ್ಟು ಹುದ್ದೆಗಳನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್‌–1 ದೈಹಿಕಶಿಕ್ಷಣ ಶಿಕ್ಷಕರಿಗೆ ಬಡ್ತಿ ನೀಡುವ ಮೂಲಕ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಉಳಿದ 10 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.