ADVERTISEMENT

ಟಿಪ್ಪು ಜಯಂತಿ ಆಚರಣೆ ಖಚಿತ: ಸಚಿವೆ ಜಯಮಾಲಾ

‘ವಿರೋಧಿಸುವುದರಿಂದ ಉಂಟಾಗುವ ಅನಾಹುತಕ್ಕೆ ಬಿಜೆಪಿ ಹೊಣೆ’

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2018, 20:15 IST
Last Updated 3 ನವೆಂಬರ್ 2018, 20:15 IST

ಬೆಂಗಳೂರು: ‘ಇದೇ 10ರಂದು ಟಿಪ್ಪು ಜಯಂತಿ ಆಚರಿಸಲಾಗುವುದು. ಬಿಜೆಪಿ ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಅದರಿಂದ ಉಂಟಾಗುವ ಅನಾಹುತಗಳಿಗೆ ಅವರೇ ಹೊಣೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರೂ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ಪ್ರತಿ ವರ್ಷದಂತೆ ಈ ಬಾರಿಯೂ ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ನಿರ್ಧಾರ ತಿಳಿಸಿದ್ದಾರೆ. ಸರ್ಕಾರದ ನಿಯಮ ಹಾಗೂ ರೂಪುರೇಷೆಗಳ ಪ್ರಕಾರವೇ ಕಾರ್ಯಕ್ರಮ ನಡೆಯಲಿದೆ’ ಎಂದರು.

ADVERTISEMENT

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಟಿಪ್ಪು ಜಯಂತಿ ಆಚರಣೆ ಸಂಬಂಧ ಯಾವುದೇ ಸಭೆ ನಡೆಸಿಲ್ಲ’ ಎಂದು ಜಯಮಾಲಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.