ADVERTISEMENT

ಸಚಿವ ಗೋಪಾಲಯ್ಯಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 15:23 IST
Last Updated 15 ಸೆಪ್ಟೆಂಬರ್ 2020, 15:23 IST
ಸಚಿವ ಗೋಪಾಲಯ್ಯ
ಸಚಿವ ಗೋಪಾಲಯ್ಯ    

ಬೆಂಗಳೂರು:ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಗೋಪಾಲಯ್ಯ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ.

‘ನನ್ನ ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಇಂದು ಮಧ್ಯಾಹ್ನ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ.ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ,’ ಎಂದು ಗೋಪಾಲಯ್ಯ ಅವರು ವಿನಂತಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT