ADVERTISEMENT

ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಮುನಿಯಪ್ಪ ಒತ್ತಾಯ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 14:39 IST
Last Updated 19 ಡಿಸೆಂಬರ್ 2023, 14:39 IST
ಕೆ.ಎಚ್‌.ಮುನಿಯಪ್ಪ
ಕೆ.ಎಚ್‌.ಮುನಿಯಪ್ಪ   

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಬಿಳಿಜೋಳ ಹಾಗೂ ಅಕ್ಕಿ ಸರಬರಾಜು ಮಾಡಿರುವ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ ₹2,040 ಕೋಟಿ ಉಳಿಸಿಕೊಂಡಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಹಾರ ಮತ್ತು ನಾಗರಿಕ ವ್ಯವಹಾರ ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪೀಯೂಷ್‌ ಗೋಯಲ್‌ ಅವರಿಗೆ ಮಂಗಳವಾರ ಮನವಿ ಮಾಡಿದರು. 

‘2009–10ರಿಂದಲೂ ಕೇಂದ್ರ ಸರ್ಕಾರವು ರಾಜ್ಯದ ಏಜೆನ್ಸಿಗಳ ಹಣವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದು ಹಣ ಬಿಡುಗಡೆಗೆ ಮನವಿ ಮಾಡಿದ್ದಾರೆ. ಕೇಂದ್ರ ಈ ಸಂಬಂಧ ತ್ವರಿತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ. 

‘ಈ ವರ್ಷ ಹೈಬ್ರಿಡ್‌ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹3,180 ಹಾಗೂ ಮಾಲ್ಡಂಡಿ ಜೋಳಕ್ಕೆ ಕ್ವಿಂಟಲ್‌ಗೆ ₹ 3,225 ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಮಾಲ್ಡಂಡಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ₹4,500 ನಿಗದಿ ಮಾಡಬೇಕು. ಈ ಮೂಲಕ ರಾಜ್ಯದ ರೈತರ ನೆರವಿಗೆ ಧಾವಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.