
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಮುಖ್ಯಮಂತ್ರಿ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.
ಬಿಜೆಪಿಯ ವಿ.ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಮುಖ್ಯಮಂತ್ರಿ ಅವರ ಪುತ್ರನ ಹಸ್ತಕ್ಷೇಪದಿಂದ ಬೇಸತ್ತು ಜಾರ್ಜ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ವಾಹಿನಿಗಳಲ್ಲಿ ಬಂದಿದೆ. ವಾಸ್ತವ ಸಂಗತಿ ಸದನದಲ್ಲಿ ಹೇಳಲಿ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.