ADVERTISEMENT

ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಬಾಕಿ ಮೊತ್ತ ಬಿಡುಗಡೆಗೆ ಆದೇಶ: ಕೋಟ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 9:13 IST
Last Updated 12 ಅಕ್ಟೋಬರ್ 2021, 9:13 IST
   

ಬೆಂಗಳೂರು: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡಬೇಕಿದ್ದ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನಗಳ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.

ಮಂಗಳವಾರ ಎರಡೂ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ₹55 ಕೋಟಿ ಪ್ರೋತ್ಸಾಹ ಧನ ನೀಡಬೇಕಿದೆ. ಅದನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದ್ದೇನೆ' ಎಂದರು.

ವಿವಿಧ ಕೋರ್ಸ್ ಗಳಿಗೆ ಆಡಳಿತ ಮಂಡಳಿ ಕೋಟಾದಲ್ಲಿ ಪ್ರವೇಶ ಪಡೆದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 13,000 ವಿದ್ಯಾರ್ಥಿಗಳು ತಮಗೂ ವಿದ್ಯಾರ್ಥಿ ವೇತನ ನೀಡುವಂತೆ ಮನವಿ ಮಾಡಿದ್ದರು. ಮಾನವೀಯ ನೆಲೆಯಲ್ಲಿ ಈ ಬೇಡಿಕೆಯನ್ನು ಒಪ್ಪಿಕೊಂಡಿದ್ದು, ಹಣ ಬಿಡುಗಡೆಗೆ ಆದೇಶಿಸಲಾಗಿದೆ ಎಂದರು.

ADVERTISEMENT

ಹಿಂದುಳಿದ ವರ್ಗಗಳ 1.90 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿ ಬಾಕಿ ಇದೆ. ವಾರದೊಳಗೆ ಅನುದಾನ ಬಿಡುಗಡೆ ಮಾಡಿ, ಮಕ್ಕಳಿಗೆ ತಲುಪಿಸಲು ಅಗತ್ಯ ಕ್ತಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.