ಬೆಂಗಳೂರು: ಕೊರೊನಾ ವೈರಸ್ ವಿರುದ್ಧದ ಹೋರಾಟದ ನೆರವಿಗಾಗಿ ತೋಟಗಾರಿಕೆ ಸಚಿವ ನಾರಾಯಣಗೌಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶುಕ್ರವಾರ ₹5 ಲಕ್ಷ ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶುಕ್ರವಾರ ಅವರ ಕಚೇರಿಯಲ್ಲಿ ಭೇಟಿಯಾದತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ಕೆ ಸಿ ನಾರಾಯಣಗೌಡ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದರು. ಚೆಕ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.