ADVERTISEMENT

ಲಾಕ್‌ಡೌನ್ ಸಂಪೂರ್ಣ ತೆರವು ಸದ್ಯಕ್ಕಿಲ್ಲ?

​ಪ್ರಜಾವಾಣಿ ವಾರ್ತೆ
Published 29 ಮೇ 2021, 21:18 IST
Last Updated 29 ಮೇ 2021, 21:18 IST
ಕಂದಾಯ ಸಚಿವ ಆರ್. ಅಶೋಕ
ಕಂದಾಯ ಸಚಿವ ಆರ್. ಅಶೋಕ   

ಬೆಂಗಳೂರು: ‘ಲಾಕ್‌ಡೌನ್ ಮುಂದುವರಿಸಿದರೆ ಸೂಕ್ತ ಎಂಬ ವರದಿಯನ್ನು ತಜ್ಞರ ಸಮಿತಿ ನೀಡಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

‘ದೆಹಲಿಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ 1 ಸಾವಿರಕ್ಕಿಂತ ಕಡಿಮೆಯಾಗಿದೆ.ಬೆಂಗಳೂರಿನಲ್ಲಿ ನಿತ್ಯ 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈ ಸಂಖ್ಯೆ ಈಗ 5 ಸಾವಿರಕ್ಕ ಇಳಿದಿದೆ. ಅದು 1 ಸಾವಿರಕ್ಕಿಂತ ಕಡಿಮೆಯಾದರೆ ಲಾಕ್‌ಡೌನ್ ಸಂಪೂರ್ಣ ತೆರವು ಮಾಡಬಹುದು’ ಎಂದು ಅಭಿಪ್ರಾಯಪಟ್ಟರು.

‘ಜೂನ್ 7ರ ತನಕ ಲಾಕ್‌ಡೌನ್ ಮುಂದುವರಿಯಲಿದೆ. ಒಮ್ಮೆಲೆ ಲಾಕ್‌ಡೌನ್ ತೆರವುಗೊಳಿಸಿದರೆ ಮತ್ತೆ ಕೋವಿಡ್ ಹರಡುವಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ, ಹಂತ–ಹಂತವಾಗಿ ಸಡಿಲ ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿದ್ದೇವೆ. ಅಂತಿಮವಾಗಿ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಮೂರು ದಿನ ಮುಂಚೆಯೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.