ADVERTISEMENT

ಕೇಂದ್ರ ಜಲಶಕ್ತಿ ಸಚಿವರ ಜತೆ ಜಾರಕಿಹೊಳಿ‌ ಚರ್ಚೆ 22ರಂದು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 21:36 IST
Last Updated 20 ಫೆಬ್ರುವರಿ 2021, 21:36 IST
   

ಬೆಂಗಳೂರು: ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಸೋಮವಾರ (ಫೆ. 22) ದೆಹಲಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಅದಕ್ಕೂ ಮೊದಲು (ಫೆ.21), ದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಕುರಿತಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಜೊತೆ ಅವರು ಸಭೆ ನಡೆಸಲಿದ್ದಾರೆ.

ಸಚಿವರ ಜೊತೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ಕಾರ್ಯದರ್ಶಿ ಅನಿಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.