ADVERTISEMENT

ನಾಳೆ ಶಿವಳ್ಳಿ ಹುಟ್ಟೂರು ಯರಗುಪ್ಪಿಯಲ್ಲಿ ಅಂತ್ಯಸಂಸ್ಕಾರ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2019, 10:47 IST
Last Updated 22 ಮಾರ್ಚ್ 2019, 10:47 IST
   

ಹುಬ್ಬಳ್ಳಿ: ಸಚಿವ ಶಿವಳ್ಳಿ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿಯ ಮದೀನಾ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ಸಂಜೆ 6 ಗಂಟೆಯವರೆಗೂ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಬಳಿಕ ಅವರ ಸ್ವಕ್ಷೇತ್ರ ಕುಂದಗೋಳಕ್ಕೆ ತೆಗೆದಕೊಂಡು ಹೊಂಗಿ ಸಂಜೆ 6.30ರಿಂದ ರಾತ್ರಿ 9ರ ವರಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಕುಟುಂಬದ ಮೂಲಗಳು ತಿಳಿಸಿವೆ.

ನಂತರ ಅವರ ಹುಟ್ಟೂರಾದ ಯರಗುಪ್ಪಿಗೆ ಕೊಂಡೊಯ್ಯಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನದ ಬಳಿಕ ಅವರ ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖ ನಾಯಕರು ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮವೊಂದರಲ್ಲಿ ಶಿವಳ್ಳಿ ಹಾಡು...

ಸಚಿವ ಶಿವಳ್ಳಿ ಅವರು ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು ಉರುಳಿಹೋಗದು’ ಎಂಬಸಿನಿಮಾ ಹಾಡು ಹಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.