ADVERTISEMENT

ವಿಶ್ವನಾಥ್‌ ವಿವಾದಾತ್ಮಕ ಹೇಳಿಕೆ ನೀಡಿ ಮುಜುಗರ ಉಂಟು ಮಾಡಬಾರದು: ಹೆಬ್ಬಾರ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2020, 8:08 IST
Last Updated 28 ಆಗಸ್ಟ್ 2020, 8:08 IST
ಸಚಿವ ಶಿವರಾಮ ಹೆಬ್ಬಾರ
ಸಚಿವ ಶಿವರಾಮ ಹೆಬ್ಬಾರ   

ಹುಬ್ಬಳ್ಳಿ: ನಾವು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬಂದಾಗ ಆ ಪಕ್ಷದ ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಹಿರಿಯರಾದ ಎಚ್. ವಿಶ್ವನಾಥ್‌ ಅನಗತ್ಯವಾಗಿ ವಿವಾದಾತ್ಮಕ ಹೇಳಿಕೆ ನೀಡಿ ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಾರದು ಎಂದು ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ವಿಶ್ವನಾಥ್ ಯಾವ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್‌ ಕುರಿತು ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ. ಬಿಜೆಪಿ ಸೇರಿದ ಮೇಲೆ ಅವರು ಪಕ್ಷದ ನಿಲುವಿಗೆ ಬದ್ಧರಾಗಿರಬೇಕು. ಪಕ್ಷದ ಸಿದ್ಧಾಂತಕ್ಕೆ ಹೊಂದಿಕೊಳ್ಳಬೇಕು. ಗುರುವಾರ ‌ಅವರಿಗೆ ಕರೆ ಮಾಡಿದರೆ, ಸಿಗಲಿಲ್ಲ. ಯಾರೂ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದು’ ಎಂದರು.

ಕಾರ್ಡ್‌ ಇಲ್ಲದವರಿಗೂ ಔಷಧಿ ನೀಡಲು ಚಿಂತನೆ: ಇಎಸ್‌ಐ ಆಸ್ಪತ್ರೆಗಳಲ್ಲಿ ಪ್ರತಿವರ್ಷ ಸಾಕಷ್ಟು ಔಷಧಿಗಳು ಉಳಿಯುತ್ತಿವೆ. ಆದ್ದರಿಂದ ಇಎಸ್‌ಐ ಕಾರ್ಡ್‌ ಇಲ್ಲದವರಿಗೂ ಔಷಧಿಗಳನ್ನು ಕೊಡಬೇಕು ಎನ್ನುವುದು ವೈಯಕ್ತಿಕ ಅಭಿಪ್ರಾಯ. ಇದಕ್ಕೆ ಕಾನೂನಿನಲ್ಲಿ ತೊಡಕುಗಳಿದ್ದು, ಬೆಂಗಳೂರಿನಲ್ಲಿ ಸೆ. 4 ಹಾಗೂ 5ರಂದು ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.