ADVERTISEMENT

ಅಕ್ಕಿ ಕೇಳಿದ ರೈತನನ್ನು ನಿಂದಿಸಿ ಮಾನಸಿಕ ವಿಕೃತಿ ಪ್ರದರ್ಶನ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 17:13 IST
Last Updated 28 ಏಪ್ರಿಲ್ 2021, 17:13 IST
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ಕರೆ ಮಾಡಿ ಅಕ್ಕಿ ಕಡಿತದ ಬಗ್ಗೆ ಪ್ರಶ್ನಿಸಿದ ರೈತನಿಗೆ ಸಚಿವ ಉಮೇಶ್ ಕತ್ತಿ, ಸಾಯಿ ಎಂದು ನಿಂದಿಸಿದ್ದ ವಿಚಾರಕ್ಕೆ ಸಂಬಂದಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ.

ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.

ADVERTISEMENT

ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.