ADVERTISEMENT

‘ಲಾಕ್‌ಡೌನ್‌–ಸೆಮಿ ಲಾಕ್‌ಡೌನ್ ಇಲ್ಲ’–ಸಚಿವ ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 17:26 IST
Last Updated 22 ಮಾರ್ಚ್ 2021, 17:26 IST
ಸಚಿವ ಡಾ.ಕೆ. ಸುಧಾಕರ್
ಸಚಿವ ಡಾ.ಕೆ. ಸುಧಾಕರ್   

ಬೆಂಗಳೂರು: ‘ಕೋವಿಡ್ ಎರಡನೇ ಅಲೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಸೆಮಿ ಲಾಕ್‌ಡೌನ್‌ ಅಥವಾ ಲಾಕ್‌ಡೌನ್‌ ಇಂದಿನ ಪರಿಸ್ಥಿತಿಗೆ ಅನ್ವಯವಾಗುವುದಿಲ್ಲ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆಸೋಮವಾರ ಮಾತನಾಡಿದ ಅವರು, ‘ಮಹಾರಾಷ್ಟ್ರ, ಕೇರಳ ಗಡಿಭಾಗಗಳಿಂದ ಬರುವ ಜನರ ಮೇಲೆ ತೀವ್ರ ನಿಗಾ ಇರಿಸುವುದು, ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಬಿಡದಿರುವುದು ಅಥವಾ ಅಲ್ಲೇ ಪರೀಕ್ಷೆ ಮಾಡುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.

‘ಗಡಿಭಾಗಗಳಲ್ಲಿ ಕ್ರಮ ವಹಿಸಲು ಗೃಹ ಇಲಾಖೆಯ ಸಹಯೋಗ ಬೇಕಿದೆ. ಇದಕ್ಕಾಗಿ ಮುಖ್ಯಮಂತ್ರಿ ಅವರು ಈಗಾಗಲೇ ಸಭೆ ನಡೆಸಿದ್ದಾರೆ’ ಎಂದರು.

ADVERTISEMENT

‘ಮದುವೆ ಸಮಾರಂಭಗಳಲ್ಲಿ ನಿಗದಿಪಡಿಸಿದ ಮಿತಿ, ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವ ಕ್ರಮ ಅನುಸರಿಸಬೇಕು. ಇಲ್ಲದಿದ್ದರೆ ಮಾಲೀಕರು, ಆಯೋಜಕರಿಗೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಭೌತಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿ, ಸೋಂಕಿತರ ಪ್ರಮಾಣ ಹೆಚ್ಚಿದ್ದರೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ, ಕ್ರಮ ವಹಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.