ADVERTISEMENT

ಮುಖ್ಯಶಿಕ್ಷಕರು ನಂಬಿಕೆ ಉಳಿಸಿಕೊಳ್ಳಲಿಲ್ಲ: ಸಚಿವ ಎಸ್. ಸುರೇಶ್‌ಕುಮಾರ್

ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಬಹಿರಂಗ: ಶಿಕ್ಷಣ ಸಚಿವರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 20:00 IST
Last Updated 25 ಫೆಬ್ರುವರಿ 2020, 20:00 IST
ಸುರೇಶ್ ಕುಮಾರ್
ಸುರೇಶ್ ಕುಮಾರ್   

ಮೈಸೂರು: ‘ಮುಖ್ಯಶಿಕ್ಷಕರ ಮೇಲೆ ನಂಬಿಕೆ ಇಟ್ಟಿದ್ದೆವು. ಆದರೆ, ಅವರು ಆ ನಂಬಿಕೆ ಉಳಿಸಿಕೊಳ್ಳಲಿಲ್ಲ’ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮಂಗಳವಾರ ಇಲ್ಲಿ ಬೇಸರ ವ್ಯಕ್ತಪಡಿಸಿದರು.

ನಂಜನಗೂಡಿನ ಕಾರ್ಮೆಲ್ ಕಾನ್ವೆಂಟ್‌ನಲ್ಲಿ ನಡೆದ ‘ವಿದ್ಯಾರ್ಥಿಗ ಳೊಂದಿಗೆ ಸಂವಾದ’ದಲ್ಲಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಬಹಿರಂಗ ಗೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

‘ಪೂರ್ವಸಿದ್ಧತಾ ಪರೀಕ್ಷೆಯಂತೆಯೇ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆಯೂ ಬಹಿರಂಗಗೊಂಡರೆ, ಕಷ್ಟಪಟ್ಟು ಅಭ್ಯಾಸ ಮಾಡಿದ ವಿದ್ಯಾರ್ಥಿಗಳ ಪಾಡೇನು?’ ಎಂದು ವಿದ್ಯಾರ್ಥಿನಿ ಗಗನಾ ಆತಂಕ ತೋಡಿ ಕೊಂಡಾಗ, ಸಚಿವರು ಮೇಲಿನಂತೆ
ಪ್ರತಿಕ್ರಿಯಿಸಿದರು. ‘ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಮುಖ್ಯ ಶಿಕ್ಷಕರಿಗೆ 3 ದಿನ ಮೊದಲೇ ನೀಡಲಾಗಿತ್ತು. ಕೆಲವರು ಅದನ್ನು ‘ವಾಟ್ಸ್‌ಆ್ಯಪ್‌’ನಲ್ಲಿ, ‘ಹೆಲೊ ಆ್ಯಪ್‌’ನಲ್ಲಿ ಹಾಕಿದರು. ಅವರ ವಿರುದ್ಧ ಯಾವ ಕ್ರಮ ಕೈಗೊಳ್ಳಬೇಕು ಎಂಬುದು ನಮಗೆ ಬಿಟ್ಟ ವಿಚಾರ. ವಿದ್ಯಾರ್ಥಿಗಳು ಓದಿನಲ್ಲಿ ಮಗ್ನರಾಗಬೇಕು’ ಎಂದರು.

ADVERTISEMENT

ದೆಹಲಿ ಮಾದರಿಯಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳನ್ನು ರೂಪಿಸುವುದು ಸುಲಭವಲ್ಲ. ಅಲ್ಲಿ ಕೇವಲ 449 ಸರ್ಕಾರಿ ಶಾಲೆಗಳಿದ್ದರೆ, ನಮ್ಮ ರಾಜ್ಯದಲ್ಲಿ ಅವುಗಳ ಸಂಖ್ಯೆ 53 ಸಾವಿರ. ದೆಹಲಿ ಶಾಲೆಗಳಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತೇವೆ
ಎಸ್‌. ಸುರೇಶ್‌ಕುಮಾರ್‌
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.