ADVERTISEMENT

ಪಠ್ಯದಲ್ಲಿ ಟಿಪ್ಪು: ಮೂರು ದಿನಗಳಲ್ಲಿ ವರದಿ ನೀಡಲು ಪಠ್ಯಪುಸ್ತಕ ಸಂಘಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 15:08 IST
Last Updated 28 ಅಕ್ಟೋಬರ್ 2019, 15:08 IST
   

ಬೆಂಗಳೂರು: ಟಿಪ್ಪು ಸುಲ್ತಾನ್ ಕುರಿತಾದ ವಿಷಯವನ್ನು ಪಠ್ಯದಲ್ಲಿಉಳಿಸಿಕೊಳ್ಳುವ ಅಥವಾ ಪಠ್ಯದಿಂದ ತೆಗೆದುಹಾಕುವ ಕುರಿತು ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ಮಡಿಕೇರಿ ವಿಧಾನಸಭಾ ಸದಸ್ಯ ಅಪ್ಪಚ್ಚು ರಂಜನ್ ಅವರು ಟಿಪ್ಪು ಸುಲ್ತಾನ್ ಕುರಿತಾದ ಪಠ್ಯವನ್ನು ತೆಗೆದು ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸಬೇಕೆಂದು ಶಿಕ್ಷಣ ಸಚಿವರಿಗೆ ಮನವಿಸಲ್ಲಿಸಿದ್ದರು.

ಈ ಮನವಿಯನ್ನು ಪುರಸ್ಕರಿಸಿದ ಸಚಿವ ಸುರೇಶ್ ಕುಮಾರ್ ಅವರು, ಇತಿಹಾಸಪುಸ್ತಕದ ಟಿಪ್ಪು ಸುಲ್ತಾನ್ ವಿಷಯದಕುರಿತು ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ‌ ಸಭೆಯನ್ನು ಕರೆದು ಆ ಸಭೆಗೆ ಶಾಸಕರಾದ ಶ್ರೀ ಅಪ್ಪಚ್ಚು ರಂಜನ್ ಅವರನ್ನೂ ಆಹ್ವಾನಿಸಬೇಕು. ಅಲ್ಲದೆಈ ಪಠ್ಯದ ಅಗತ್ಯತೆ ಹಾಗೂ ಅದನ್ನು ಉಳಿಸಿಕೊಳ್ಳುವ ಇಲ್ಲವೇ ತೆಗೆದುಹಾಕುವ ಕುರಿತು ಸಾಧಕ ಬಾಧಕಗಳ ಕುರಿತಂತೆ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.