ADVERTISEMENT

ಶ್ರೀಗಳ ಹೆಗಲ ಮೇಲೆ ಕೈ ಹಾಕಿದ ಅಶೋಕ, ಫೋಟೊಗಾಗಿ ಸಿಎಂ ಪರದಾಟ: ಕಾಂಗ್ರೆಸ್ ಟೀಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2022, 13:05 IST
Last Updated 11 ನವೆಂಬರ್ 2022, 13:05 IST
   

ಬೆಂಗಳೂರು: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದರು. ಆ ಬಳಿಕ, ಪ್ರಧಾನಿ ಜೊತೆ ನಿಂತಿದ್ದ ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಸಚಿವ ಆರ್. ಅಶೋಕ ಕೈಹಾಕಿರುವುದು ಮತ್ತು ಪ್ರಧಾನಿ ಪಕ್ಕದಲ್ಲಿ ನಿಂತು ಫೋಟೊ ತೆಗೆಸಿಕೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಒದ್ದಾಡುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್. ಅಶೋಕ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಅದು ಟೀಕಿಸಿದೆ.

ಅಲ್ಲದೆ, ರಾಜ್ಯದ ಮುಖ್ಯಮಂತ್ರಿ ಫೋಟೋ ತೆಗೆಸಿಕೊಳ್ಳಲೂ ಹರಸಾಹಸಪಡಬೇಕೇ? ಪ್ರಧಾನಿ ಪಕ್ಕ ಸ್ವತಂತ್ರವಾಗಿ ನಿಲ್ಲಲೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರೆ ಸಿಎಂ ಹುದ್ದೆಗೆ ಆಗುತ್ತಿರುವ ಅವಮಾನವಿದು.

ADVERTISEMENT

ಜಗ್ಗೇಶ್ ಅವರ ಹಿಂದೆ ನಿಂತು ಅವರನ್ನು ತಳ್ಳಿಕೊಂಡು ಮುಖ ತೋರಿಸುವ #PuppetCM ಅವರ ಸ್ಥಿತಿ ಶೋಚನೀಯವಾಗಿದೆ! ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.