ADVERTISEMENT

'ಆಟಕ್ಕುಂಟು ಲೆಕ್ಕಕ್ಕಿಲ್ಲ' ಇದೇನು ವಿಪರ್ಯಾಸವೇ: ಬಿಜೆಪಿ ಶಾಸಕ ಆನಂದ ಮಾಮನಿ ಕಿಡಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2020, 7:29 IST
Last Updated 4 ಫೆಬ್ರುವರಿ 2020, 7:29 IST
ಆನಂದ ಮಾಮನಿ
ಆನಂದ ಮಾಮನಿ   

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯ ದಿನ ಸಮೀಪಿಸುತ್ತಿದ್ದಂತೆಯೇ, ಬೆಳಗಾವಿಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಬಿಜೆಪಿ ಶಾಸಕ ಆನಂದ ಮಾಮನಿ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನಕ್ಕೆ ತಮ್ಮನ್ನು ‌ಪರಿಗಣಿಸದಿರುವ ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅವರು, ವರಿಷ್ಠರ ವಿರುದ್ಧ ಸಿಟ್ಟಾಗಿದ್ದಾರೆ.

ಕ್ಷೇತ್ರದ ಜನತೆ ಪಕ್ಷದ ಮೇಲಿಟ್ಟಿರುವ ಅಮೂಲ್ಯ ಪ್ರೀತಿ-ಅಭಿಮಾನಕ್ಕೆ ಬೆಲೆ ಇಲ್ಲದಂತಾಗಿದೆ. ಕಾಲವೇ ಎಲ್ಲಕ್ಕೂ ಉತ್ತರಿಸುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT

ಈಗಾಗಲೇ ಸಾಕಷ್ಟು ಬಾರಿ ಸರ್ಕಾರದಲ್ಲಿ ಅಧಿಕಾರ ಅನುಭವಿಸಿದವರು ಯಾವತ್ತೂ ತಾವು ಪಡೆದ ಸ್ಥಾನಮಾನ ಕಿಂಚಿತ್ತೂ ತ್ಯಜಿಸಲು ಹಿಂದೆಟು ಹಾಕುತ್ತಿರುವುದು ಒಂದೆಡೆಗಾದರೆ, ಪಕ್ಷದ ಮುಖಂಡರೂ ಸಹ ನನ್ನ ಕ್ಷೇತ್ರವನ್ನು ಹಾಗೂ ನಮ್ಮಂಥವರನ್ನು ಬೆಳೆಸಲು ಯಾವುದೇ ಆಸಕ್ತಿ ತೋರಿಸದಿರುವುದು ಇನ್ನೊಂದೆಡೆ. ಇನ್ನು ಮುಂದೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ, ಎಂಬುದು ಯಕ್ಷಪ್ರಶ್ನೆಯಾಗಿದೆ ಎಂದು ಆಳಲು ತೋಡಿಕೊಂಡಿದ್ದಾರೆ.

ಇದು ಪಕ್ಷ ನಿಷ್ಠರಿಗೆ ಹಾಗೂ ಮತದಾರರಿಗೆ ಆದ ಘೋರ ಅಪಮಾನ ಅಲ್ಲದೇ ಇನ್ನೇನು, ಎಂಬ ವಿಚಾರ ಎಲ್ಲರಲ್ಲೂ ಸ್ಪಷ್ಟ ಮೂಡಿದೆ. ಕಾಯ್ದು ನೋಡಬೇಕು. ಆದರೆ, ಮುಂದಿನ ನಡೆ ವಿಚಾರ ಮಾಡುವಂತದ್ದು ಎಂದು ಹೇಳುವ ಮೂಲಕ ಕೂತುಹಲ ಮುಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.