ADVERTISEMENT

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅಪ್ಪಚ್ಚು ರಂಜನ್

​ಪ್ರಜಾವಾಣಿ ವಾರ್ತೆ
Published 31 ಜುಲೈ 2020, 11:16 IST
Last Updated 31 ಜುಲೈ 2020, 11:16 IST
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್   

ಮಡಿಕೇರಿ: ‘ಐದು ಬಾರಿ ಶಾಸಕನಾಗಿದ್ದು ನಾನೂ ಸಚಿವ ಸ್ಥಾನದ ಆಕಾಂಕ್ಷಿ’ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಶುಕ್ರವಾರ ಹೇಳಿದರು.

ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಹಿರಿಯ ಶಾಸಕನಿದ್ದೇನೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂಬುದುರಲ್ಲಿ ಯಾವುದೇ ಅನುಮಾನ ಇಲ್ಲ. ಮತ್ತೊಮ್ಮೆ ಸಂಪುಟ ಪುನರ್‌ ರಚನೆ ಕಸರತ್ತು ಆರಂಭವಾಗಿದೆ. ಹೈಕಮಾಂಡ್‌ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇನೆ. ಹೈಕಮಾಂಡ್‌ ಮೇಲೆ ವಿಶ್ವಾಸವಿದೆ’ ಎಂದು ರಂಜನ್‌ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT