ಚನ್ನಾರೆಡ್ಡಿ ಪಾಟೀಲ
ಬೆಂಗಳೂರು: ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದರು.
ಮುಖ್ಯಮಂತ್ರಿಯ ನಿವಾಸ ‘ಕಾವೇರಿ’ಗೆ ಬಂದ ಚನ್ನಾರೆಡ್ಡಿ, ಯಾದಗಿರಿ ನಗರ ಠಾಣೆಯ ಪಿಎಸ್‌ಐ ಪರಶುರಾಮ್ ಅವರ ಸಾವಿನ ನಂತರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಕೂಡಾ ಇದ್ದರು.
‘ಪರಶುರಾಮ್ ಅವರ ಸಾವಿಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಮತ್ತು ಪುತ್ರ ಪಂಪನಗೌಡ ₹ 30 ಲಕ್ಷಕ್ಕೆ ಬೇಡಿಕೆ ಇಟ್ಟಿರುವುದೇ ಕಾರಣ’ ಎಂದು ಮೃತ ಪರಶುರಾಮ್ ಪತ್ನಿ ಶ್ವೇತಾ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.