
ಪ್ರಜಾವಾಣಿ ವಾರ್ತೆ
ಎಚ್‌ಡಿಕೆ ಸಭೆಗೆ ಶಾಸಕ ಜಿ.ಟಿ. ದೇವೇಗೌಡ ಗೈರು.. ಸಿಎಂ ಸಭೆಗೆ ಹಾಜರು!
ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಲ್ಲಿ ನ.7ರಂದು ನಡೆಸಿದ ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ (ದಿಶಾ) ಸಭೆಗೆ ಗೈರು ಹಾಜರಾಗಿದ್ದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಡಿಪಿ ಸಭೆಯಲ್ಲಿ ಹಾಜರಾಗಿ ಗಮನಸೆಳೆದರು. ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಅವರು, ಕುಮಾರಸ್ವಾಮಿ ಅವರು ನಗರದಲ್ಲಿ ಭಾಗವಹಿಸಿದ್ದ ಯಾವ ಕಾರ್ಯಕ್ರಮದಲ್ಲೂ ಪಾಲ್ಗೊಂಡಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.