ADVERTISEMENT

ಲಂಚ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ವಿರೂಪಾಕ್ಷಪ್ಪ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2023, 19:30 IST
Last Updated 6 ಮಾರ್ಚ್ 2023, 19:30 IST
ಕೆ.ಮಾಡಾಳ್‌ ವಿರೂಪಾಕ್ಷಪ್ಪ
ಕೆ.ಮಾಡಾಳ್‌ ವಿರೂಪಾಕ್ಷಪ್ಪ   

ಬೆಂಗಳೂರು: ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ಕೆ.ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಅರ್ಜಿಯು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್‌ ಅವರ ಮುಂದೆ ಮಂಗಳವಾರಕ್ಕೆ (ಮಾ.7) ನಿಗದಿಯಾಗಿದೆ. ‘ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೋರಿ ವಿರೂಪಾಕ್ಷಪ್ಪ ಮತ್ತೊಂದು ಅರ್ಜಿ ದಾಖಲಿಸಿದ್ದು, ಇದು ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT