ADVERTISEMENT

ಮನೆಗೆ ಮರಳಿದ ಶಾಸಕ ಹ್ಯಾರಿಸ್

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 22:49 IST
Last Updated 23 ಜನವರಿ 2020, 22:49 IST
ಆಸ್ಪತ್ರೆಯಿಂದ ಮನೆಗೆ ಹೋಗುವ ವೇಳೆ ಬೆಂಬಲಿಗರಿಗೆ ಹಸ್ತಲಾಘವ ನೀಡಿದ ಶಾಸಕ ಎನ್‌.ಎ. ಹ್ಯಾರಿಸ್‌ – ಪ್ರಜಾವಾಣಿ ಚಿತ್ರ
ಆಸ್ಪತ್ರೆಯಿಂದ ಮನೆಗೆ ಹೋಗುವ ವೇಳೆ ಬೆಂಬಲಿಗರಿಗೆ ಹಸ್ತಲಾಘವ ನೀಡಿದ ಶಾಸಕ ಎನ್‌.ಎ. ಹ್ಯಾರಿಸ್‌ – ಪ್ರಜಾವಾಣಿ ಚಿತ್ರ   

ಬೆಂಗಳೂರು: ಸೇಂಟ್‌ ಫಿಲೋಮಿನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಂತಿನಗರ ಕ್ಷೇತ್ರದ ಶಾಸಕ ಎನ್‌.ಎ. ಹ್ಯಾರಿಸ್‌ ಗುರುವಾರ ಮನೆಗೆ ಮರಳಿದರು.

ಎಂಜಿಆರ್‌ ಜನ್ಮದಿನದ ಪ್ರಯುಕ್ತವನ್ನಾರ್ ಪೇಟೆಯ ಬಜಾರ್ ಸ್ಟ್ರೀಟ್‌ನಲ್ಲಿ ಬುಧವಾರ ರಾತ್ರಿ ಸಂಗೀತ ರಸಮಂಜರಿ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮದ ಅತಿಥಿಯಾಗಿ ಹ್ಯಾರಿಸ್‌ ಭಾಗವಹಿಸಿದ್ದರು. ಅವರು ಕುಳಿತಿದ್ದ ಜಾಗಕ್ಕೆ ಯಾವುದೋ ಸ್ಫೋಟಕ ಬಂದು ಬಿದ್ದಿತ್ತು. ಅವರ ಕಾಲಿಗೆ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ‘ಅನುಮಾನಸ್ಪದ ವಸ್ತು ಸ್ಫೋಟಗೊಂಡಿದೆ. ಅದು ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿರಲಿಲ್ಲವೆಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.