ADVERTISEMENT

ಪ್ರಿಯಾಂಕ್‌ ಖರ್ಗೆಗೆ ಡೆಂಗಿ ಜ್ವರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2022, 15:21 IST
Last Updated 4 ಡಿಸೆಂಬರ್ 2022, 15:21 IST
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ   

ಕಲಬುರಗಿ: ಚಿತ್ತಾಪುರ ಮತ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರು ಡೆಂಗಿ ಜ್ವರದಿಂದ ಬಳಲುತ್ತಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.

‘ಕಳೆದ ಮೂರು ದಿನಗಳಿಂದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಹಾಗೂ ಜನರು, ಕಾರ್ಯಕರ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ಕ್ಷಮೆಯಾಚಿಸುತ್ತೇನೆ’ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ಮೂರು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದು, ವರದಿಯ ಅನುಸಾರ ಡೆಂಗಿ ಇರುವುದು ದೃಢಪಟ್ಟಿದೆ. ಆದ್ದರಿಂದ ನಿರಂತರ ವೈದ್ಯಕೀಯ ಆರೈಕೆಯಲ್ಲಿದ್ದು, ಇನ್ನೂ ಕೆಲವು ದಿನಗಳ ಕಾಲ ಯಾರನ್ನೂ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ತಮ್ಮೆಲ್ಲರ ಸಹನೆ ಮತ್ತು ಸಹಕಾರ ಸದಾ ನನ್ನೊಂದಿಗಿರಲಿ’ ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.