ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿ ಅವರು ನಡೆಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು ಶಾಸಕರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ. ಆದರೂ, ಬುಧವಾರ ಪರೀಕ್ಷೆಗೆ ಒಳಗಾಗಲಿದ್ದಾರೆ.
‘ಸದ್ಯಕ್ಕೆ ಯಾರೂ ನನ್ನನ್ನು ಭೇಟಿ ಮಾಡಲು ಬರಬೇಡಿ’ ಎಂದು ವಿನಂತಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.