ADVERTISEMENT

ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಉಪ‌ ಸಭಾಧ್ಯಕ್ಷ ರುದ್ರಪ್ಪ‌ ಲಮಾಣಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 4:14 IST
Last Updated 22 ಮಾರ್ಚ್ 2025, 4:14 IST
   

ಹಾವೇರಿ: ಹಿರಿಯೂರು ಬಳಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭಾ ಉಪ‌ ಸಭಾಧ್ಯಕ್ಷರೂ ಆಗಿರುವ ಹಾವೇರಿ ಶಾಸಕ ರುದ್ರಪ್ಪ‌ ಲಮಾಣಿ ಅವರು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆಜೆ ಹಳ್ಳಿ‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರುದ್ರಪ್ಪ ಅವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಗಾಯಗೊಂಡಿದ್ದ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದಾಗಿ ಆಪ್ತರು ತಿಳಿಸಿದ್ದಾರೆ.

ಮಾಜಿ ಸಂಸದ ಉಮೇಶ ಜಾಧವ, ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಹಾಗೂ ಕರ್ನಾಟಕ ಪ್ರದೇಶ ಬಂಜಾರ (ಲಮಾಣಿ) ಸೇವಾ ಸಂಘದ ಕಾರ್ಯದರ್ಶಿ ಸಿದ್ಯಾ ನಾಯಕ್ ಹಾಗೂ‌ ಇತರರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ‌ ನೀಡಿ ಆರೋಗ್ಯ ವಿಚಾರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.