ADVERTISEMENT

ಶಾಸಕ ಸೋಮನಗೌಡ ಪಾಟೀಲ ಸಾಸನೂರಿಗೆ ಕೋವಿಡ್-19 ದೃಢ             

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 2:44 IST
Last Updated 17 ಆಗಸ್ಟ್ 2020, 2:44 IST
ಶಾಸಕ ಸೋಮನಗೌಡ ಪಾಟೀಲ ಸಾಸನೂರ
ಶಾಸಕ ಸೋಮನಗೌಡ ಪಾಟೀಲ ಸಾಸನೂರ   
""

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಮತ್ತುಯಾದಗಿರಿ ಮತ ಕ್ಷೇತ್ರದ ಶಾಸಕ ವೆಂಕಟ ರಡ್ಡಿ ಗೌಡ ಮುದ್ನಾಳ ಅವರಿಗೆ ಕೋವಿಡ್‌ ದೃಢಪಟ್ಟಿದೆ.

ಈ ಸಂಬಂಧ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಶಾಸಕ ಸೋಮನಗೌಡ, ಆಗಸ್ಟ್ 14ರಂದು ಆರೋಗ್ಯ ತಪಾಸಣೆ ಹಾಗೂ ಕೊರೊನಾ ಟೆಸ್ಟ್ ಮಾಡಿಸಿದೆ. ಕೋವಿಡ್ ಪಾಸಿಟಿವ್ ದೃಢವಾಗಿದೆ.ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವೆ. ಆರೋಗ್ಯದಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಸೇವೆಗೆ ಮರಳುತ್ತೇನೆ. ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗೃತಾ ಕ್ರಮವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪರಸ್ಪರ ಅಂತರ ಕಾಪಾಡಿಕೊಂಡು ಮನೆಯಲ್ಲಿ ಇರಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.