ADVERTISEMENT

ನಿಗಮ ಮಂಡಳಿಗೆ ಪರಿಗಣಿಸದಂತೆ ಕೋರಿಕೆ: ಸಿಎಂಗೆ ಪತ್ರ ಬರೆದ ಶಾಸಕ ಟಿ.ರಘುಮೂರ್ತಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2024, 13:40 IST
Last Updated 11 ಜನವರಿ 2024, 13:40 IST
   

ಚಿತ್ರದುರ್ಗ: ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದಂತೆ ಕೋರಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ನಿಗಮ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸದಂತೆ ವಿನಂತಿಸುತ್ತೇನೆ. ಪಕ್ಷ, ವರಿಷ್ಠರು ಹಾಗೂ ಮತದಾರರಿಗೆ ಮುಜುಗರವಾಗದ ರೀತಿಯಲ್ಲಿ ನಡೆದುಕೊಳ್ಳುತ್ತೇನೆ’ ಎಂದು ಜ.10ರಂದು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪಕ್ಷ ನನಗೆ ಅವಕಾಶ ಮಾಡಿಕೊಟ್ಟಿದೆ. 2013, 2018 ಹಾಗೂ 2023ರಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿದ್ದಾರೆ. ಈ ಅವಕಾಶಕ್ಕೆ ಪಕ್ಷ ಹಾಗೂ ವರಿಷ್ಠರಿಗೆ ಋಣಿಯಾಗಿರುತ್ತೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಸಹಕಾರ ನಿರೀಕ್ಷಿಸುತ್ತಿದ್ದೇನೆ’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.