ADVERTISEMENT

ವಿನಯ್ ಕುಲಕರ್ಣಿ ಕೋರ್ಟ್‌ಗೆ ಶರಣು: ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜಡ್ಜ್ ಆದೇಶ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 16:34 IST
Last Updated 13 ಜೂನ್ 2025, 16:34 IST
<div class="paragraphs"><p>ಶಾಸಕ ವಿನಯ್ ಕುಲಕರ್ಣಿ</p></div>

ಶಾಸಕ ವಿನಯ್ ಕುಲಕರ್ಣಿ

   

ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಅವರು ಶುಕ್ರವಾರ ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾದರು.

ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಬೆಳಿಗ್ಗೆ, 'ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರ ಮುಂದೆ ಶರಣಾದ ವಿನಯ ಕುಲಕರ್ಣಿ ಅವರನ್ನು ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.

ADVERTISEMENT

‘ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪದಡಿ ವಿನಯ ಕುಲಕರ್ಣಿ ಅವರ ಜಾಮೀನು ರದ್ದುಪಡಿಸಬೇಕು’ ಎಂದು ಸಿಬಿಐ ಕೋರಿತ್ತು. ಈ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿದೆ.

ಪ್ರಕರಣವೇನು?

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.