ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರನ್ನು ಬುಧವಾರ ಇಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ನಡೆಸಲು ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಈ ಪಟ್ಟಿಗೆ ಅನುಮೋದನೆ ನೀಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ‘ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು, ಅವರು ಮರಳಿದ ಬಳಿಕ ಸಮಾಲೋಚಿಸಿ ಪಟ್ಟಿ ಆಖೈರು ಮಾಡಲಾಗುವುದು’ ಎಂದು ಭರವಸೆ ನೀಡಿದರು. ರಾಹುಲ್ ಅವರನ್ನು ಭೇಟಿ ಮಾಡಲು 10 ದಿನಗಳೊಳಗೆ ಬರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಸರ್ಕಾರದ ಸಚಿವರ ವಿರುದ್ಧ ಆರೋಪ, ಸಚಿವರ ಹಾಗೂ ಶಾಸಕರ ಹೇಳಿಕೆಗಳ ಬಗ್ಗೆ ವೇಣುಗೋಪಾಲ್ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.