ADVERTISEMENT

ವಿಧಾನ ಪರಿಷತ್ ಚುನಾವಣೆ: ಈ ಬಾರಿಯೂ ಠೇವಣಿ ಕಳೆದುಕೊಂಡ ವಾಟಾಳ್ ನಾಗರಾಜ್

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 1:12 IST
Last Updated 16 ಜೂನ್ 2022, 1:12 IST
ವಾಟಾಳ್‌ ನಾಗರಾಜ್‌
ವಾಟಾಳ್‌ ನಾಗರಾಜ್‌   

ಮೈಸೂರು: 2008ರ ವಿಧಾನಸಭೆ ಚುನಾವಣೆಯಿಂದ ಸತತ ಸೋಲು ಕಾಣುತ್ತಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು‌ ವಿಧಾನಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲೂ ಠೇವಣಿ ಕಳೆದುಕೊಂಡರು.

ಕಳೆದ ಬಾರಿ‌ಯೂ ಈ‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವಾಟಾಳ್, ಮತ್ತೊಮ್ಮೆ ನಡೆಸಿದ ಪ್ರಯತ್ನ ವಿಫಲವಾಗಿದೆ. ಪದವೀಧರ ಮತದಾರರು ಅವರಿಗೆ ಮಣೆ ಹಾಕಿಲ್ಲ. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ 2008ರಿಂದ ಸತತ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತಿದ್ದರು.

ದಕ್ಷಿಣ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ, ಮೈಸೂರು- ಚಾಮರಾಜನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಲೂ ಸೋತಿದ್ದರು. ದಕ್ಷಿಣ ಪದವೀಧರರ ಕ್ಷೇತ್ರದಿಂದ 2ನೇ ಬಾರಿಗೆ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.