ADVERTISEMENT

ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ: ಮತಪಟ್ಟಿ ಪರಿಷ್ಕರಣೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 19:19 IST
Last Updated 24 ಸೆಪ್ಟೆಂಬರ್ 2019, 19:19 IST

ಬೆಂಗಳೂರು: ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ ಎರಡು ಸ್ಥಾನಗಳಿಗೆ ಮುಂದಿನ ವರ್ಷ ಚುನಾವಣೆ ನಡೆಯಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚುನಾವಣೆ ಆಯೋಗ ಚಾಲನೆ ನೀಡಿದೆ.

ಆಗ್ನೇಯ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಆರ್.ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್.ವಿ.ಸಂಕನೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಶರಣಪ್ಪ ಮಟ್ಟೂರು, ಬೆಂಗಳೂರು ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವ ಪುಟ್ಟಣ್ಣ ಅವರ ಅಧಿಕಾರ ಅವಧಿ 2010 ಜೂನ್ 30ಕ್ಕೆ ಕೊನೆಗೊಳ್ಳಲಿದೆ.

‘ಈ ನಾಲ್ಕು ಕ್ಷೇತ್ರಗಳಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಆರಂಭಿಸಿದ್ದು, ಅಕ್ಟೋಬರ್ 1ರಿಂದ ಹೆಸರು ನೋಂದಾಯಿಸಲು ಅವಕಾಶ ನೀಡಿದ್ದು, ನವೆಂಬರ್ 6ರ ಒಳಗೆ ನೋಂದಾಯಿಸಿಕೊಳ್ಳಬೇಕು. ನ. 23ರಂದು ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ನ. 23ರಿಂದ ಡಿ. 9ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರುತ್ತದೆ. ಡಿ. 30ರಂದು ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು’ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಂಗಳವಾರ ಹೇಳಿದರು.

ADVERTISEMENT

ಬೆಳಗಾವಿ, ಬೆಂಗಳೂರು, ಕಲಬುರ್ಗಿ ಪ್ರಾದೇಶಿಕ ಆಯುಕ್ತರು ನೋಂದಣಿ ಅಧಿಕಾರಿಯಾಗಿದ್ದು, ಆಯಾ ವಿಭಾಗದ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಧಿಕಾರಿಗಳು ಸಹಾಯಕ ನೋಂದಣಿ ಅಧಿಕಾರಿಗಳಾಗಿರುತ್ತಾರೆ ಎಂದುಪತ್ರಿಕಾಗೋಷ್ಠಿಯಲ್ಲಿತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.