ADVERTISEMENT

ಪರಿಷತ್‌ ಚುನಾವಣೆ: ಬಾಬುರಾವ್‌ ಚಿಂಚನಸೂರು ಬಿಜೆಪಿ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 12:41 IST
Last Updated 30 ಜುಲೈ 2022, 12:41 IST
ಬಾಬುರಾವ್‌ ಚಿಂಚನಸೂರು
ಬಾಬುರಾವ್‌ ಚಿಂಚನಸೂರು   

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಆಗಸ್ಟ್‌ 11ಕ್ಕೆ ನಡೆಯುವ ಚುನಾವಣೆಗೆ ಮಾಜಿ ಸಚಿವ ಬಾಬುರಾವ್‌ ಚಿಂಚನಸೂರು ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆಮಾಡಲಾಗಿದೆ.

ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯು ಉತ್ತರ ಪ್ರದೇಶ ವಿಧಾನ ಪರಿಷತ್‌ನ ಎರಡು ಮತ್ತು ಕರ್ನಾಟಕ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಬಾಬುರಾವ್‌ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಚೇರಿಯ ಉಸ್ತುವಾರಿಯೂ ಆಗಿರುವ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಸುದೀರ್ಘ ಕಾಲ ಸಕ್ರಿಯರಾಗಿದ್ದ ಚಿಂಚನಸೂರು, 2018ರಲ್ಲಿ ಬಿಜೆಪಿ ಸೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.