ADVERTISEMENT

ಪಕೋಡ ಮಾರಲು ಹೇಳಿದ ಮೋದಿಗೆ ಪದವೀಧರರು ಪಾಠ ಕಲಿಸಿದ್ದಾರೆ: ಧ್ರುವನಾರಾಯಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 7:30 IST
Last Updated 16 ಜೂನ್ 2022, 7:30 IST
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ‌ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡಿದರು. ಎಂ.ಕೆ.ಸೋಮಶೇಖರ್, ಆರ್.ಮೂರ್ತಿ, ಡಾ.ಬಿ.ಜೆ.ವಿಜಯ್ ಕುಮಾರ್, ಡಾ.ಡಿ.ತಿಮ್ಮಯ್ಯ ಇದ್ದರು
ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ‌ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮಾತನಾಡಿದರು. ಎಂ.ಕೆ.ಸೋಮಶೇಖರ್, ಆರ್.ಮೂರ್ತಿ, ಡಾ.ಬಿ.ಜೆ.ವಿಜಯ್ ಕುಮಾರ್, ಡಾ.ಡಿ.ತಿಮ್ಮಯ್ಯ ಇದ್ದರು   

ಮೈಸೂರು: 'ಉದ್ಯೋಗ ಸೃಷ್ಟಿಸದೇ ಪಕೋಡ ಮಾರಲು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದವೀಧರರು ಸೋಲಿನ ಉಡುಗೊರೆ ನೀಡಿದ್ದಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವ್ಯಂಗ್ಯವಾಡಿದರು.

'ದಕ್ಷಿಣ ಪದವೀಧರ ಕ್ಷೇತ್ರದ ಪ್ರಜ್ಞಾವಂತ ಮತದಾರರು ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಮುಂಬರುವ ವಿಧಾನಸಭೆ- ಲೋಕಸಭಾ ಚುನಾವಣೆಗೆ ಪದವೀಧರ ಕ್ಷೇತ್ರದ ಚುನಾವಣೆಯ ಗೆಲುವು ದಿಕ್ಸೂಚಿಯಾಗಲಿದೆ' ಎಂದು ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

'ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಎಂಟು ತಿಂಗಳ ಹಿಂದೆಯೇ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಅಭ್ಯರ್ಥಿಯನ್ನು ಘೋಷಿಸಿದ್ದರು. ಪ್ರತಿ ಗ್ರಾಮಕ್ಕೂ ಕಾರ್ಯಕರ್ತರು ತೆರಳಿ ಪದವೀಧರರನ್ನು ಮನವೊಲಿಸಿದ್ದರು. ಸಂಘಟಿತ ಹೋರಾಟಕ್ಕೆ ಗೆಲುವು ಸಿಕ್ಕಿದೆ' ಎಂದು ಸಂತಸ ವ್ಯಕ್ತಪಡಿಸಿದರು.

ADVERTISEMENT

'ರಾಹುಲ್ ಗಾಂಧಿ ಸಿಂಹಸ್ವಪ್ನವಾಗಿ ಬಿಜೆಪಿಗರಿಗೆ ಕಂಡಿದ್ದಾರೆ. ಭಾರತ್ ಜೋಡೋ ಪಾದಯಾತ್ರೆ ಆರಂಭಕ್ಕೆ ಬಿಜೆಪಿ ಹೆದರಿದೆ. ಹೀಗಾಗಿಯೇ ಇ.ಡಿ ಮೂಲಕ ಅವರ ಶಕ್ತಿ ಹತ್ತಿಕ್ಕುವ ಪ್ರಯತ್ನ ನಡೆಸಿದೆ. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವುದು ಖಂಡನೀಯ. ದೇಶವೇ ಗೂಂಡಾರಾಜ್ಯವಾಗಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.