ADVERTISEMENT

ಪರಿಷತ್ ಚುನಾವಣೆ: 65 ವರ್ಷ ಮೇಲ್ಪಟ್ಟವರಿಗೂ ಮತದಾನದ ಅವಕಾಶ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 19:31 IST
Last Updated 13 ಜೂನ್ 2020, 19:31 IST
MLC Election
MLC Election   

ಬೆಂಗಳೂರು: ವಿಧಾನಪರಿಷತ್‌ ಚುನಾವಣಾ ಪ್ರಕ್ರಿಯೆಯಲ್ಲಿ 65 ವರ್ಷ ದಾಟಿದ ಅಭ್ಯರ್ಥಿಗಳು, ಮತದಾರರು, ಸಿಬ್ಬಂದಿಗೂ ಭಾಗವಹಿಸಲು ಅನುಮತಿ ನೀಡಲಾಗಿದೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಮಧ್ಯೆಯೇ, ಇದೇ 29ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಅನುಸರಿಸಬೇಕಾದ ಬಗ್ಗೆ ಸುರಕ್ಷತಾ ಮಾರ್ಗಸೂಚಿಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸ್ಪಷ್ಟಪಡಿಸಿದ್ದಾರೆ.

ಕ್ವಾರಂಟೈನ್‌ನಲ್ಲಿರುವ ಶಾಸಕರ ವಿವರಗಳನ್ನು ಆಯಾ ಜಿಲ್ಲಾಧಿಕಾರಿಗಳು ನೀಡಬೇಕು. ಜೊತೆಗೆ ಅವರ ಪ್ರಯಾಣದ ವೇಳಾಪಟ್ಟಿ ನೀಡಬೇಕು. ಅಲ್ಲದೆ, ಎಲ್ಲ ಅಭ್ಯರ್ಥಿಗಳು, ಮತದಾರರಿಗೆ ಪ್ರಯಾಣ ವ್ಯವಸ್ಥೆಯನ್ನು ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ADVERTISEMENT

ಚುನಾವಣಾಧಿಕಾರಿಯಿಂದ ಅನುಮತಿ ಪಡೆದವರು ಕಂಟೈನ್‌ಮೆಂಟ್‌ ವಲಯದಲ್ಲಿದ್ದರೆ ಅವರಿಗೆ ಚುನಾವಣೆ ಉದ್ದೇಶಕ್ಕಾಗಿ ಮಾತ್ರ ಅನಿರ್ಬಂಧಿತ ಓಡಾಟಕ್ಕೆ ಅನುಮತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.