ADVERTISEMENT

ವಿಧಾನಪರಿಷತ್‌: ಹಲವರ ಭವಿಷ್ಯ ಇಂದು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2021, 22:48 IST
Last Updated 13 ಡಿಸೆಂಬರ್ 2021, 22:48 IST
   

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಮಂಗಳವಾರ ನಡೆಯಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ಸಮಾಜ ಕಲ್ಯಾಣ ಸಚಿವ ಹಾಗೂ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅಗ್ನಿಪರೀಕ್ಷೆ ಎದುರಿಸಿದ್ದಾರೆ. ಬೊಮ್ಮಾಯಿ ಸರ್ಕಾರದಲ್ಲಿ ವಿಧಾನಪರಿಷತ್ತಿನ ಏಕೈಕ ಸಚಿವರಾಗಿರುವ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದರೆ, ಸಭಾ ನಾಯಕರಾಗಿಯೇ ಮುಂದುವರೆಯಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷಸಲೀಂ ಅಹಮದ್‌, ಪರಿಷತ್ತಿನ ಹಾಲಿ ಸದಸ್ಯ ಕಾಂಗ್ರೆಸ್‌ನ ಕೆ.ಸಿ.ಕೊಂಡಯ್ಯ, ಜೆಡಿಎಸ್‌ನ ಸೂರಜ್‌ ರೇವಣ್ಣ, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಚನ್ನರಾಜ ಹಟ್ಟಿಹೊಳಿ, ಜಾರಕಿಹೊಳಿ ಕುಟುಂಬದ ಪಕ್ಷೇತರ ಅಭ್ಯರ್ಥಿ ಲಖನ್‌ ಜಾರಕಿಹೊಳಿ, ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಪ್ರದೀಪ ಶೆಟ್ಟರ್ ಕಣದಲ್ಲಿರುವ ಪ್ರಮುಖರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.