ADVERTISEMENT

ಮೇಲ್ಮನೆ ಚುನಾವಣೆ: ಮೂವರ ಅವಿರೋಧ ಆಯ್ಕೆ ಖಚಿತ

​ಪ್ರಜಾವಾಣಿ ವಾರ್ತೆ
Published 20 ಜೂನ್ 2023, 20:09 IST
Last Updated 20 ಜೂನ್ 2023, 20:09 IST
Jagadish Shettar
Jagadish Shettar   

ಬೆಂಗಳೂರು: ವಿಧಾನಪರಿಷತ್ತಿನ ಮೂರು ಸ್ಥಾನಗಳ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಜಗದೀಶ ಶೆಟ್ಟರ್, ಎನ್‌.ಎಸ್‌,ಬೋಸರಾಜು ಮತ್ತು ತಿಪ್ಪಣ್ಣಪ್ಪ ಕಮಕನೂರ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರುವ ಕಾರಣ ಮೂವರೂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಈ ಮೂವರ ನಾಮಪತ್ರ ಸಲ್ಲಿಕೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಇತರ ಸಚಿವರು
ಹಾಜರಿದ್ದರು.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಕಾಂಗ್ರೆಸ್‌ ಸೇರಿದ ಜಗದೀಶ ಶೆಟ್ಟರ್ ಅವರು ಹುಬ್ಬಳ್ಳಿ–ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಸೋತರೂ ಕೈಬಿಡುವುದಿಲ್ಲ ಎಂಬ ಸಂದೇಶವನ್ನು ರವಾನಿಸಲು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ADVERTISEMENT

ಎನ್‌.ಎಸ್‌.ಬೋಸರಾಜು ಅವರು ಸಚಿವರಾಗಿ ಕಾರ್ಯನಿರ್ವಹಿಸು
ತ್ತಿದ್ದು, ವಿಧಾನಪರಿಷತ್‌ಗೆ ಟಿಕೆಟ್‌ ನೀಡಲಾಗಿದೆ. ಚುನಾವಣೆಯಲ್ಲಿ ಸೋತಿದ್ದ ಬಾಬುರಾವ್ ಚಿಂಚನಸೂರ ಅವರು, ಕೋಲಿ ಸಮಾಜದ ಪ್ರಾತಿನಿಧ್ಯದಡಿ ಆಯ್ಕೆ ಬಯಸಿದ್ದರು. ಆದರೆ, ಅವರ ಬದಲು ಅದೇ ಸಮುದಾಯವನ್ನು ಪ್ರತಿನಿಧಿಸುವ ತಿಪ್ಪಣ್ಣಪ್ಪ ಅವರನ್ನು ಮೇಲ್ಮನೆಗೆ ಕಳುಹಿಸಲು ಪಕ್ಷ ನಿರ್ಧರಿಸಿದೆ. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆಪ್ತ ಬಣದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.